ಸರ್ಕಾರಿ ಶಾಲೆಗಳ ಗುಣಮಟ್ಟ ಹೆಚ್ಚಿಸಲು, ಹಾಗೂ ಶಾಲೆಗಳನ್ನು ಅಭಿವೃದ್ದಿ ಪಡಿಸಲು ಶಾಲೆಗಳನ್ನು ಹೈಟೆಕ್ ಶಾಲೆಯಾಗಿ ಮಾಡುವ ಸಲುವಾಗಿ, ಗ್ರಾಮ ಪಂಚಾಯಿತಿಯಲ್ಲಿ ಪಬ್ಲಿಕ್ ಶಾಲೆಗಳಾಗಿ ರೂಪಿಸಲು ಇದೀಗ ಸರ್ಕಾರ ಅನುಷ್ಠಾನಕ್ಕೆ ತರಲಿದೆ. ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲು ಸರ್ಕಾರ ಮುಂದಾಗಿದೆ.

ಕಾರ್ಪೋರೇಟ್ ಕಂಪನಿಗಳ ಸಹಕಾರದೊಂದಿಗೆ ಮುಂದಿನ 3 ವರ್ಷದಲ್ಲಿ 2000 ಸಾರ್ವಜನಿಕ ಶಾಲೆಗಳನ್ನು ನಿರ್ಮಿಸಲಾಗುವುದು. ಎರಡು ಅಥವಾ ಮೂರು ಪಂಚಾಯಿತಿಗೆ ಒಂದು ಅತ್ಯಾಧುನಿಕ ಗ್ರಾಮ ಪಂಚಾಯಿತಿ ಶಾಲೆಗಳನ್ನು ತಲೆ ಎತ್ತಲಿವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಪ್ರಾಥಮಿಕ ಹಂತದಲ್ಲಿ ಜಿಲ್ಲೆಯ 5 ತಾಲೂಕು ವ್ಯಾಪ್ತಿಯಲ್ಲಿ ಒಟ್ಟು 22 ಪಂಚಾಯಿತಿ ಕೇಂದ್ರದಲ್ಲಿ ಇಂತಹ ಶಾಲೆಗಳನ್ನು ನಿರ್ಮಿಸಲು ಇಲಾಖೆ ರೂಪುರೇಷೆಗಳನ್ನು ಸಿದ್ದಪಡಿಸಿದೆ. ಈ ಯೋಜನೆಯ ಅನುಷ್ಠಾನಕ್ಕೆ ಸಿದ್ದತೆ ನಡೆದಿದ್ದು ಬೆಂಗಳೂರು ಬಿಡದಿ ಕೈಗಾರಿಕಾ ಪ್ರದೇಶ ಸೇರಿದಂತೆ ಹಲವು ಕಾರ್ಪೋರೇಟ್ ಕಂಪನಿಗಳು ತಮ್ಮ ಸಿಎಸ್ಆರ್ ನಿಧಿಯನ್ನು ಮಹತ್ವದ ಉದ್ದೇಶಕ್ಕೆ ಬಳಸಲು ಮುಂದೆ ಬಂದಿದೆ.
ಮಕ್ಕಳನ್ನು ಆಕರ್ಷಿಸಲು ಸುಸಜ್ಜಿತ ಆಕರ್ಷಣೀಯ ಕಟ್ಟಡ ನಿರ್ಮಿಸುವುದು, ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನದಲ್ಲಿ ಕನಿಷ್ಠ 4 ಎಕರೆ ಜಾಗದಲ್ಲಿ ಶಾಲೆ ನಿರ್ಮಾಣ, ಮಕ್ಕಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸುವುದು, ಕಾಲ ಕಾಲಕ್ಕೆ ಮಕ್ಕಳ ಆರೋಗ್ಯ ತಪಾಸಣೆ, ಹೆಣ್ಣು ಮಕ್ಕಳ ವಿಶ್ರಾಂತಿ ಕೊಠಡಿ, ಉತ್ತಮ ಶೌಚಾಲಯ, ಪ್ರಯೋಗಾಲಯ, ಕ್ರೀಡಾಂಗಣ ಸೇರಿದಂತೆ ಮಕ್ಕಳಿಗೆ ಎಲ್ಲಾ ತರಬೇತಿ ನೀಡುವ ಹೈಟೆಕ್ ಶಾಲೆ ನಿರ್ಮಿಸಲು ಶಿಕ್ಷಣ ಇಲಾಖೆ ಮುಂದಾಗಿದೆ.
ಇದನ್ನೂ ಸಹ ಓದಿ: ಶುಕ್ರವಾರದ ಸೂರ್ಯನ ಉದಯದೊಂದಿಗೆ ಚಂದ್ರನ ಮೇಲೆ ಪ್ರಗ್ಯಾನ್ ರೋವರ್ ಮತ್ತೆ ಎಚ್ಚರ..!
ಉದ್ದೇಶ:
ಗ್ರಾಮೀಣ ಮಕ್ಕಳಿಗೆ ಆಂಗ್ಲ ಮತ್ತು ಕನ್ನಡ ಮಾಧ್ಯಮಗಳೆರಡರಲ್ಲೂ ಗುಣಮಟ್ಟದ ಶಿಕ್ಷಣ ಒದಗಿಸುವುದು, ಮಕ್ಕಳ ಸರ್ವತೋಮುಖ ಅಭಿವೃದ್ದಿ, ಶಿಕ್ಷಣ ವಂಚಿತ ಮಕ್ಕಳ ಪ್ರಮಾಣವನ್ನು ಶೂನ್ಯಕ್ಕೆ ಇಳಿಸುವುದು, ಶಿಕ್ಷಕರ ಕೊರತೆ ಇರುವ ಶಾಲೆಗಳನ್ನು ವಿಲೀನಗೊಳಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರಿ ಶಾಲೆಗಳು ಹಿಂದುಳಿದಿವೆ. ಈ ಸಮಸ್ಯೆಗಳಿಗೆ ಪರಿಹಾರವಾಗಿ ಯೋಜನೆ ಹಂತ ಹಂತವಾಗಿ ಜಾರಿಗೆ ಬರಲಿದೆ.