ಗಾಂಧಿ ಗ್ರಾಮ ಪುರಸ್ಕಾರಕ್ಕೆ ರಾಜ್ಯದ 237 ಪಂಚಾಯಿತಿಗಳು ಆಯ್ಕೆ!
ಜನಸೇವೆಗಾಗಿ ಪ್ರತಿ ವರ್ಷ ಅಕ್ಟೋಬರ್ 2 ರಂದು ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಗಾಂಧಿ ಗ್ರಾಮ ಪುರಸ್ಕಾರ ಮತ್ತು ವಿಶೇಷ ಗಾಂಧಿ ಗ್ರಾಮ ಪುರಸ್ಕಾರ ನೀಡಲಾಗುತ್ತಿದ್ದು, 233 ಗ್ರಾಮ ಪಂಚಾಯಿತಿಗಳನ್ನು ಗಾಂಧಿ ಗ್ರಾಮ ಪುರಸ್ಕಾರ ಮತ್ತು ನಾಲ್ಕು ವಿಶೇಷ ಗಾಂಧಿ ಗ್ರಾಮಕ್ಕೆ ಆಯ್ಕೆ ಮಾಡಲಾಗಿದೆ.
ಕರ್ನಾಟಕದ 31 ಜಿಲ್ಲೆಗಳ 233 ಗ್ರಾಮ ಪಂಚಾಯಿತಿಗಳಿಗೆ ಗಾಂಧಿ ಗ್ರಾಮ ಪುರಸ್ಕಾರ ನೀಡಲಾಗುವುದು. ಕುಂದಾಪುರ ತಾಲೂಕಿನ ಹೊಸಾಡು ಗ್ರಾಮ ಪಂಚಾಯಿತಿ, ಉಡುಪಿಯ 80 ಬಡಗಬೆಟ್ಟು, ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಬೆಳವಟಿಗೆ ಮತ್ತು ತಟ್ಟೆಗೇರಿ ಗ್ರಾಮ ಪಂಚಾಯಿತಿಗೆ ವಿಶೇಷ ಗಾಂಧಿ ಗ್ರಾಮ ಪುರಸ್ಕಾರ ನೀಡಲಾಗುವುದು.
ಇದನ್ನೂ ಸಹ ಓದಿ : ಮೈಸೂರು ದಸರಾ: 2 ನೇ ಬಾರಿ ದಸರಾ ಆನೆಗಳ ತೂಕ ತಪಾಸಣೆ, ಅರ್ಜುನನೇ ಅತೀ ಹೆಚ್ಚು ತೂಕ
ಅಕ್ಟೋಬರ್ 2 ರಂದು ಗಾಂಧಿ ಜಯಂತಿಯಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆಯುವ ಸಮಾರಂಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೇರಿದಂತೆ ಪಂಚಾಯಿತಿಗಳ ಪ್ರತಿನಿಧಿಗಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ರಾಜ್ಯ ರಾಜಧಾನಿ, ಪಂಚಾಯತ್ ರಾಜ್ ಇಲಾಖೆ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.