ಬೆಂಗಳೂರಿನ ಆಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ; ಎಂಟು ಬೈಕುಗಳು ಸುಟ್ಟು ಭಸ್ಮ

0

ಬೆಂಗಳೂರಿನಲ್ಲಿ ಶನಿವಾರ ಬೆಳಗ್ಗೆ ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಅವಘಡದಲ್ಲಿ ಓರ್ವ ವ್ಯಕ್ತಿ ಗಾಯಗೊಂಡಿದ್ದು, ಎಂಟು ಬೈಕ್‌ಗಳು ಸುಟ್ಟು ಭಸ್ಮವಾಗಿವೆ.

A fire incident in agarbatti factory in Bangalore;

ಬೆಂಗಳೂರಿನ ಜೋಗುಪಾಳ್ಯ ಬಳಿಯ ಅಗರಬತ್ತಿ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಓರ್ವನಿಗೆ ಗಾಯಗಳಾಗಿದ್ದು, ಎಂಟು ಬೈಕ್‌ಗಳು ಸುಟ್ಟು ಭಸ್ಮವಾಗಿವೆ. ಮೂರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಿಸಿದವು. ಶನಿವಾರ ಬೆಳಗ್ಗೆ ಶಾರ್ಟ್ ಸರ್ಕ್ಯೂಟ್‌ನಿಂದ ಈ ಘಟನೆ ನಡೆದಿದೆ ಎಂದು ಟಿವಿ9 ಕನ್ನಡ ವರದಿ ಮಾಡಿದೆ.

ಗಾಯಗೊಂಡ ರವಿಕುಮಾರ್ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಕಾರ್ಖಾನೆಯಲ್ಲಿ ಸಂಗ್ರಹಿಸಲಾಗಿದ್ದ ಕೆಮಿಕಲ್ ಸೋರಿಕೆಯಾಗಿ ಬೈಕ್‌ಗಳು ಬೆಂಕಿಗೆ ಆಹುತಿಯಾಗಿ ಕಾರ್ಖಾನೆ ಮುಂಭಾಗ ನಿಲ್ಲಿಸಿದ್ದ ಎಂಟು ಬೈಕ್‌ಗಳು ಬೆಂಕಿಗೆ ಆಹುತಿಯಾಗಿವೆ.

ಇದನ್ನೂ ಸಹ ಓದಿ: ಕರ್ನಾಟಕದಲ್ಲಿ ಹೆಚ್ಚುವರಿಯಾಗಿ ಮತ್ತೆ 22 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ

ಇದು ಕಳೆದ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ವಸತಿ ಕಟ್ಟಡದ ನೆಲ ಮಹಡಿಯಲ್ಲಿರುವ ಸಣ್ಣ ಕಾರ್ಖಾನೆಯಾಗಿದೆ. ಅಗ್ನಿ ಅವಘಡದ ಹಿನ್ನೆಲೆಯಲ್ಲಿ ವಿಜಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಕಾರ್ಖಾನೆ ಕಾರ್ಯನಿರ್ವಹಿಸಲು ಪರವಾನಗಿ ಪಡೆದಿದೆಯೇ ಎಂಬುದು ಸ್ಪಷ್ಟವಾಗಿಲ್ಲ.

ಬೆಂಗಳೂರಿನ ಅತ್ತಿಬೆಲೆಯಲ್ಲಿ ಇತ್ತೀಚೆಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಪಟಾಕಿ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿ 16 ಮಂದಿ ಸಾವನ್ನಪ್ಪಿದ್ದರು.

Leave A Reply

Your email address will not be published.