ಕರ್ನಾಟಕ ಶಿಕ್ಷಣ ಮಂಡಳಿ ಪ್ರಕಟಣೆ: SSLC ಮತ್ತು 2nd PUC ಪರೀಕ್ಷೆ, ಪುನರಾವರ್ತಿತ ಅರ್ಹ ವಿದ್ಯಾರ್ಥಿಗಳ ನೋಂದಣಿ
ಶಾಲಾ ಶಿಕ್ಷಣ ಇಲಾಖೆಯು ಮುಂಬರುವ ಮಾಧ್ಯಮಿಕ ಶಾಲಾ ರಜೆ ಪ್ರಮಾಣಪತ್ರ ಎಸ್‌ಎಸ್‌ಎಲ್‌ಸಿ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ನೋಂದಾಯಿಸಲು ವಿದ್ಯಾರ್ಥಿಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
ಕರ್ನಾಟಕ SSLC ಮತ್ತು 2nd PUC ಪರೀಕ್ಷೆ:
ಈ ಕುರಿತು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರಿ ಮತ್ತು ಸರ್ಕಾರಿ ಮಾನ್ಯತೆ ಪಡೆದ ಅನುದಾನಿತ ಮತ್ತು ಅನುದಾನ ರಹಿತ ಪ್ರೌಢಶಾಲಾ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಶಾಲಾ, ಖಾಸಗಿ, ಪುನರಾವರ್ತಿತ ಅರ್ಹ ವಿದ್ಯಾರ್ಥಿಗಳನ್ನು ನೋಂದಾಯಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
2023-24ನೇ ಸಾಲಿನಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ಕ್ಕೆ ಹಾಜರಾಗುವ ವಿದ್ಯಾರ್ಥಿಗಳಿಗೆ ಮಾರ್ಗಸೂಚಿಗಳನ್ನು ಶಾಲಾ ಶಿಕ್ಷಣ ಇಲಾಖೆ ಮಂಡಳಿಯ ವೆಬ್‌ಸೈಟ್ https://kseeb.karnataka.gov.in ನಲ್ಲಿ ಪ್ರಕಟಿಸಿದೆ. ಎಂದು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯ ಪರೀಕ್ಷಾಂಗ ನಿರ್ದೇಶಕ ಎಚ್.ಎನ್.ಗೋಪಾಲಕೃಷ್ಣ ತಿಳಿಸಿದ್ದಾರೆ.
ಇದನ್ನೂ ಸಹ ಓದಿ: ರೇಷನ್ ಕಾರ್ಡ್ ನವೀಕರಣ: ತಿದ್ದುಪಡಿಗೆ ಈ ಹೊಸ ದಾಖಲೆ ಅಗತ್ಯ
ಅಕ್ಟೋಬರ್ ನಲ್ಲಿ ಶಾಲಾ ಮತ್ತು ಕಾಲೇಜುಗಳಿಗೆ ರಜೆ:
ಕರ್ನಾಟಕ ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅಕ್ಟೋಬರ್ ತಿಂಗಳಿನಲ್ಲಿ ದಸರಾ ರಜೆಯೊಂದಿಗೆ ಒಂದರ ಹಿಂದೆ ಒಂದರಂತೆ ಹಲವು ಸರ್ಕಾರಿ ರಜೆಗಳಿವೆ. ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ವಾರ್ಷಿಕ ರಜಾ ಕ್ಯಾಲೆಂಡರ್ ಪ್ರಕಾರ ಅಕ್ಟೋಬರ್ 8 ರಿಂದ 24 ರವರೆಗೆ ದಸರಾ ರಜೆ ಇದ್ದು, ಅಕ್ಟೋಬರ್ ತಿಂಗಳಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ 17 ದಿನಗಳ ದಸರಾ ರಜೆ ನೀಡಲಾಗುತ್ತದೆ.
ಶಾಲಾ ವಿದ್ಯಾರ್ಥಿಗಳಿಗೆ 17 ದಿನಗಳ ದಸರಾ ರಜೆ ಜೊತೆಗೆ ಎರಡು ಭಾನುವಾರದ ರಜೆಗಳು, ಅಕ್ಟೋಬರ್ 28 ರಂದು ಮಹರ್ಷಿ ವಾಲ್ಮೀಕಿ ಜಯಂತಿ ರಜೆ ಸೇರಿದಂತೆ ಒಟ್ಟು 20 ದಿನಗಳು. ಒಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ದಸರಾ ರಜೆ ಜತೆಗೆ ಶಾಲಾ-ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರಿಗೂ ಅಕ್ಟೋಬರ್ ತಿಂಗಳಲ್ಲಿ ಭರ್ಜರಿ ರಜೆ ಸಿಗಲಿದೆ.