ಹಿರಿಯ ನಾಗರಿಕರ ಪಿಂಚಣಿ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ
ವಿಶ್ವ ಹಿರಿಯ ನಾಗರಿಕರ ದಿನಾಚರಣೆಯಂದು ಸಿಎಂ ಸಿದ್ದರಾಮಯ್ಯನವರು ಹಿರಿಯ ಜೀವಿಗಳಿಗೆ ಸಂತಸದ ಸುದ್ದಿ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಹಿರಿಯ ನಾಗರಿಕರಿಗೆ ಪಿಂಚಣಿ ಹೆಚ್ಚಳದ ಬಗ್ಗೆ ಘೋಷಿಸಿದ್ದಾರೆ.
ಹಿರಿಯ ನಾಗರಿಕರಿಗೆ 1,200 ರೂ. ವೃದ್ದಾಪ್ಯ ವೇತನವನ್ನು ನೀಡಲಾಗುತ್ತದೆ. ಆದರೆ ಇದೀಗ 2024-25 ನೇ ಸಾಲಿನ ಬಜೆಟ್ ನಲ್ಲಿ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಅಕ್ಟೋಬರ್ 1 ರಂದು ಬೆಂಗಳೂರಿನಲ್ಲಿ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯನವರು ಇಡೀ ಪ್ರಪಂಚ ವಿಶ್ವ ಹಿರಿಯರ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತಿದೆ. ನಮ್ಮ ಸರ್ಕಾರವೂ ಕೂಡ ಹಿರಿಯ ನಾಗರಿಕರ ದಿನಾಚರಣೆ ಆಚರಿಸುತ್ತಿದೆ.
ನಾಡಿನ ಎಲ್ಲಾ ಹಿರಿಯ ನಾಗರಿಕರಿಗೆ ದಿನಾಚರಣೆಯ ಶುಭಾಶಯವನ್ನು ಸಿಎಂ ತಿಳಿಸಿದರು. ವೃದ್ದಾಪ್ಯ ವೇತನ ಹೆಚ್ಚಳಕ್ಕೆ ಮನವಿ ಮಾಡಲಾಗಿದ್ದು, ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಮುಂದಿನ ಬಜೆಟ್ ನಲ್ಲಿ ವೇತನ ಹೆಚ್ಚಳ ಮಾಡುತ್ತೇನೆ ಎಂದು ಹೇಳಿದ್ದಾರೆ. ಹಾಗೆಯೇ ಎಷ್ಟು ಹೆಚ್ಚಳ ಮಾಡಲಾಗುತ್ತದೆ ಎಂಬುದನ್ನು ಹೇಳಿಲ್ಲ. ಈಗ ಇರೋದಕ್ಕಿಂತ ಹೆಚ್ಚಳ ಮಾಡಲಾಗುತ್ತದೆ ಎಂದು ಭರಸವೆ ನೀಡಿದ್ದಾರೆ.
ಇದನ್ನೂ ಸಹ ಓದಿ: ಶಿವಮೊಗ್ಗ ನಗರದಾದ್ಯಂತ 144 ಸೆಕ್ಷನ್ ಜಾರಿ: ಈದ್ ಮಿಲಾದ್ ಮೆರವಣಿಗೆಯಲ್ಲಿ ಹಿಂಸಾಚಾರ
ದೇಶದ ಎಲ್ಲಾ ವೃದ್ದರು 100 ವರ್ಷಕ್ಕೂ ಹೆಚ್ಚು ಕಾಲ ಬಾಳಿ ಬದುಕಲಿ ಎಂದು ಆಶಿಸಿದರು. ಹಿರಿಯರನ್ನು ಗೌರವಿಸುವುದು ಸಮಾಜದ ಪ್ರತಿಯೊಬ್ಬ ವ್ಯಕ್ತಿಯ ಕರ್ತವ್ಯವಾಗಿದೆ. ಬದುಕಿರುವವರೆಗ ಸಾರ್ಥಕ ಜೀವನ ಸಾಗಿಸಬೇಕು. ಕುವೆಂಪು ಹೇಳಿದಂತೆ ಎಲ್ಲರೂ ವಿಶ್ವಮಾನವರಾಗಬೇಕು, ಯಾವ ಧರ್ಮದಲ್ಲಿ ಹುಟ್ಟಿರಬಹುದು, ಆದರೆ ಎಲ್ಲಾ ಧರ್ಮವನ್ನು ಪ್ರೀತಿಸಬೇಕು. ಇನ್ನೊಂದು ಧರ್ಮವನ್ನು ದ್ವೇಷಿಸಬಾರದು ಎಂದು ಕಿವಿ ಮಾತು ಹೇಳಿದರು.
ವೇತನ ಹೆಚ್ಚಿಸುವಂತೆ ಮನವಿ:
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾತನಾಡಿ, ವೃದ್ದಾಪ್ಯ ವೇತನ ಹೆಚ್ಚಿಸುವಂತೆ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು. ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟ ಕರ್ನಾಟಕದ ಸುಮಾರು 49 ಲಕ್ಷ ವೃದ್ದರಿಗೆ ಸರ್ಕಾರದಿಂದ ಮಾಸಿಕ 1,200 ರೂ ವೃದ್ದಾಪ್ಯ ವೆತನವನ್ನು ನೀಡಲಾಗುತ್ತಿದೆ. ಇದನ್ನು 2,000 ರೂ. ವರೆಗೆ ಹೆಚ್ಚಿಸಬೇಕು ಎಂದು ಸಿದ್ದರಾಮಯ್ಯನವರಿಗೆ ಮನವಿ ಮಾಡಿದರು.