ಕರ್ನಾಟಕದಲ್ಲಿ ಮುಂದಿನ 4 ದಿನಗಳ ಕಾಲ ಗುಡುಗು ಸಹಿತ ಮಳೆಯ ಮುನ್ಸೂಚನೆ! ಹವಾಮಾನ ಇಲಾಖೆಯಿಂದ ಎಚ್ಚರಿಕೆ!!

0

ಹಲೋ ಸ್ನೇಹಿತರೇ, ರಾಜ್ಯಾದ್ಯಂತ 4 ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆಬೆಂಗಳೂರಿನಲ್ಲಿ ಇಂದು ಕೂಡ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ಮುಂದಿನ 4 ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆಯ ಎಚ್ಚರಿಕೆ.

rain alert karnataka

ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ರಾಜ್ಯದ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದಲ್ಲಿ ಮುಂದಿನ 4 ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆಯ ಎಚ್ಚರಿಕೆ.

ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ರಾಜ್ಯದ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಗುಡುಗು ಸಹಿತ ಬಲವಾದ ಗಾಳಿ ಬೀಸುವ ಸಾಧ್ಯತೆಯಿದ್ದು, ಮರಗಳ ಕೆಳಗೆ, ತಾತ್ಕಾಲಿಕ ಆಶ್ರಯದಲ್ಲಿ ನಿಲ್ಲದಂತೆ ಎಚ್ಚರಿಕೆ ನೀಡಲಾಗಿದೆ.

ಸಂಜೆಯ ನಂತರ ಗುಡುಗು, ಗಾಳಿ ಸಹಿತ ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಗದಗ, ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಗುರುವಾರ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದಲ್ಲದೇ ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳ ಕೆಲವೆಡೆ ಶುಕ್ರವಾರವೂ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.

ಇದನ್ನೂ ಸಹ ಓದಿ : ದೀಪಾವಳಿ ಹಬ್ಬದ ಆಫರೋ ಆಫರ್!! ವಿಶೇಷ ಫೀಚರ್‌ಗಳೊಂದಿಗೆ ಈ 15 ಸ್ಮಾರ್ಟ್‌ಫೋನ್‌ಗಳು ಬಿಡುಗಡೆ

ಈ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಇದರೊಂದಿಗೆ ಮುಂದಿನ ಭಾನುವಾರದವರೆಗೆ (ನವೆಂಬರ್ 12) ಕರ್ನಾಟಕದಲ್ಲಿ ಮಳೆಯಾಗಲಿದೆ. ಸೋಮವಾರ ಸಂಜೆ ಮತ್ತು ಮಂಗಳವಾರ ಕರ್ನಾಟಕದ ಹದಿನೈದಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಸುರಿದಿದೆ. ಕರಾವಳಿ ಕರ್ನಾಟಕ ಮಾತ್ರವಲ್ಲದೆ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲೂ ತುಂತುರು ಮಳೆಯಾಗಿದೆ.

ಮುಂದಿನ 24 ಗಂಟೆಗಳಲ್ಲಿ, ದಕ್ಷಿಣ ಒಳಭಾಗ ಮತ್ತು ಕರಾವಳಿ, ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗಬಹುದು. ಕರಾವಳಿಯ ಉತ್ತರಕರ್ನಾಟಕ ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗುವ ಸೂಚನೆಗಳಿವೆ. ಇದಲ್ಲದೆ, ಉತ್ತರ ಒಳನಾಡಿನ ಗದಗ ಮತ್ತು ಹಾವೇರಿ ಜಿಲ್ಲೆಗಳ ಕೆಲವು ಭಾಗಗಳಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಲಘು ಮಳೆಯಾಗಬಹುದು, ಕೆಲವೊಮ್ಮೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ತುಮಕೂರು, ಚಿತ್ರದುರ್ಗ, ದಾವಣಗೆರೆಯ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

FAQ:

ಕರ್ನಾಟಕದಲ್ಲಿ ಎಷ್ಟು ದಿನ ಮಳೆಯಾಗಲಿದೆ?

ಮುಂದಿನ 4 ದಿನಗಳ ಕಾಲ ಗುಡುಗು ಸಹಿತ ಮಳೆಯಾಗಲಿದೆ.

ಜಿಲ್ಲೆಗಳಿಗೆ ಯಾವ ಸೂಚನೆ ನೀಡಲಾಗಿದೆ?

ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇತರೆ ವಿಷಯಗಳು:

ಕರ್ನಾಟಕದಲ್ಲಿ ಝಿಕಾ ವೈರಸ್ ಪತ್ತೆ ಬೆನ್ನಲ್ಲೇ ಆರೋಗ್ಯ ಇಲಾಖೆಯ ಅಲರ್ಟ್!!‌ ಈ ವೈರಸ್‌ನ ಲಕ್ಷಣಗಳೇನು?

ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ಬಂಪರ್: ಜಸ್ಟ್‌ ಪಿಯು‌ ಪಾಸಾದ್ರೆ 12‌,000 ದಿಂದ 20,000 ರೂ. ಉಚಿತ ಸ್ಕಾಲರ್‌ಶಿಪ್! ಇಂದೇ ಅಪ್ಲೇ ಮಾಡಿ

ಕೇಂದ್ರಕ್ಕೆ ನೀಡುವ ಪ್ರತಿ ಒಂದು ರೂಪಾಯಿ ತೆರಿಗೆಗೆ ಕೇವಲ 15 ಪೈಸೆ ಮಾತ್ರ ರಾಜ್ಯಕ್ಕೆ ವಾಪಸ್; ಸಿಎಂ ಸಿದ್ದರಾಮಯ್ಯ

Leave A Reply

Your email address will not be published.