ರೇಷನ್ ಕಾರ್ಡುದಾರರಿಗೆ ಗುಡ್ ನ್ಯೂಸ್: ಇಂದಿನಿಂದ ಹೊಸ ತಿದ್ದುಪಡಿ ಪ್ರಕ್ರಿಯೆ ಪ್ರಾರಂಭ
ಬಿಪಿಎಲ್, ಎಪಿಎಲ್ ಕಾರ್ಡ್ ದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದೆ. ಮತ್ತೆ ಆಹಾರ ಇಲಾಖೆ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಿ ಆದೇಶ ನೀಡಿದೆ. ಯಾರೆಲ್ಲಾ ನಿಮ್ಮ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಂಡಿಲ್ಲ ಅವರೆಲ್ಲರೂ ಈ ದಿನಾಂಕದೊಳಗೆ ಕಡ್ಡಾಯವಾಗಿ ಮಾಡಿಸಿ.

ಇಂದಿನಿಂದ 9 ದಿನಗಳ ಕಾಲ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. 5 ರಿಂದ 13ರವರೆಗೆ ಮತ್ತೆ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ. ಆದರೆ, ರಾಜ್ಯದ ಎಲ್ಲ ಭಾಗಗಳಲ್ಲಿ ಒಮ್ಮೆ ಪಡಿತರ ಚೀಟಿ ತಿದ್ದುಪಡಿಗೆ ಪ್ರತಿ ವಿಭಾಗದಲ್ಲಿ ಮೂರು ದಿನ ಅವಕಾಶ ಕಲ್ಪಿಸಲಾಗಿದೆ. ಈ ಕುರಿತು ಆಹಾರ ಇಲಾಖೆ ಹೆಚ್ಚುವರಿ ನಿರ್ದೇಶಕ ಜ್ಞಾನೇಂದ್ರ ಮಾಹಿತಿ ಹಂಚಿಕೊಂಡರು. ಮೊದಲ ವಲಯದಲ್ಲಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಎಪಿಎಲ್, ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ.
ಬೆಳಗ್ಗೆ 10 ರಿಂದ ಸಂಜೆ 7 ರವರೆಗೆ ತಿದ್ದುಪಡಿಗೆ ಅವಕಾಶವಿದ್ದು, ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾ. ಒನ್ ಕೇಂದ್ರಗಳಲ್ಲಿ ಮಾತ್ರ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶವಿದೆ. ಕಳೆದ ತಿಂಗಳು ಆಹಾರ ಇಲಾಖೆ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ನೀಡಿದ್ದರೂ ಸರ್ವರ್ ಡೌನ್ ಆಗಿದ್ದು, ತಿದ್ದುಪಡಿ ಮಾಡಲು ಸಾಕಷ್ಟು ಸಮಸ್ಯೆ ಉಂಟಾಗಿತ್ತು.
ಇದನ್ನೂ ಸಹ ಓದಿ: ಸಾರ್ವಜನಿಕ ಶೌಚಾಲಯ ನಿರ್ವಹಣೆ ಕುರಿತು ವರದಿ: ಸರ್ಕಾರಕ್ಕೆ ಹೈಕೋರ್ಟ್ 5 ಲಕ್ಷ ರೂ ದಂಡ
ಈ ಹಿನ್ನೆಲೆಯಲ್ಲಿ ಸೇವಾ ಕೇಂದ್ರದಲ್ಲಿ ಮಾತ್ರ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ, ಪಡಿತರ ಚೀಟಿ ತಿದ್ದುಪಡಿಗೆ ಬಯೋಮೆಟ್ರಿಕ್ ಸೌಲಭ್ಯವಿರುವ ಕಂಪ್ಯೂಟರ್ ಅಗತ್ಯವಿದ್ದು, ಬೆಂಗಳೂರು ಒನ್, ಗ್ರಾಮ ಒನ್, ಕರ್ನಾಟಕ ಒನ್ ಸೇವಾ ಕೇಂದ್ರದಲ್ಲಿ ಮಾಡಬಹುದಾಗಿದೆ. ಫಲಾನುಭವಿ ಹೆಸರು ಬದಲಾವಣೆ, ಪಡಿತರ ಕೇಂದ್ರ ಬದಲಾವಣೆ, ಕಾರ್ಡ್ ಸದಸ್ಯರ ಹೆಸರು ಅಳಿಸುವಿಕೆ ಮತ್ತು ಸೇರ್ಪಡೆ, ಕಾರ್ಡ್ ಹೆಡ್ ಹೆಸರು ಬದಲಾವಣೆ, ಮಹಿಳಾ ಹೆಸರು ಬದಲಾವಣೆ ಈ ಎಲ್ಲಾ ತಿದ್ದುಪಡಿಗಳನ್ನು ಮಾಡಲಾಗುತ್ತದೆ.
ಇದೀಗ 2ನೇ ಹಂತದಲ್ಲಿ ಬೆಳಗಾವಿ, ಶಿವಮೊಗ್ಗ, ಬಾಗಲಕೋಟೆ, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ , ಧಾರವಾಡ, ಗದಗ, ಹಾಸನ, ಹಾವೇರಿ, ಕೊಡಗು, ಮಂಡ್ಯ, ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ ಸೇರಿದಂತೆ ಒಟ್ಟು 15 ಜಿಲ್ಲೆಗಳಲ್ಲಿ ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಅಕ್ಟೋಬರ್ 8 ರಿಂದ ಅಕ್ಟೋಬರ್ 10 ರವರೆಗೆ ಅವಕಾಶ ಕಲ್ಪಿಸಲಾಗಿದೆ.