ಕರ್ನಾಟಕ ಶಾಲಾ ದಸರಾ ರಜೆ ವಿಸ್ತರಣೆ; ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
ಕರ್ನಾಟಕ ಶಿಕ್ಷಣ ಇಲಾಖೆಯು ಕರ್ನಾಟಕ ರಾಜ್ಯದಲ್ಲಿ ಈ ಬಾರಿ 15 ದಿನಗಳ ಕಾಲ ದಸರಾ ರಜೆಯನ್ನು ಘೋಷಿಸಿದೆ. ಅಕ್ಟೋಬರ್ 24 ರಂದು ವಿಜಯದಶಮಿ ಆಚರಿಸಲಾಗುತ್ತದೆ. ಕರ್ನಾಟಕ ಶಿಕ್ಷಣ ಇಲಾಖೆಯು ಹಬ್ಬದ ಮರುದಿನ ಅಕ್ಟೋಬರ್ 25 ರಂದು ಶಾಲೆಯನ್ನು ಪ್ರಾರಂಭಿಸಲು ಆದೇಶಿಸಿದೆ. ಹಬ್ಬದ ಮರುದಿನವೇ ಶಾಲೆ ಆರಂಭಿಸುವುದರಿಂದ ಮಕ್ಕಳ ಮೇಲೆ ಒತ್ತಡ ಹೆಚ್ಚಾಗುವ ಆತಂಕ ಎದುರಾಗಿದೆ.
ಇದು ಶಾಲಾ ಶಿಕ್ಷಕರ ಅಸಮಾಧಾನಕ್ಕೆ ಕಾರಣವಾಗಿದ್ದು, ಇದೀಗ ದಸರಾ ಅವಧಿಯನ್ನು ವಿಸ್ತರಿಸುವಂತೆ ಶಿಕ್ಷಕರ ಸಂಘ ಮುಖ್ಯಮಂತ್ರಿ ಸಿದ್ದರಾಮಯ್ಯ , ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಶಿಕ್ಷಣ ಸಚಿವರಿಗೆ ಪತ್ರ ಬರೆದಿದೆ. ಕರ್ನಾಟಕದ ಶಾಲೆಗಳಿಗೆ ಈಗಾಗಲೇ ದಸರಾ ರಜೆ ನೀಡಲಾಗಿದೆ. ನವರಾತ್ರಿ ಆಚರಣೆ ನಡೆಯುತ್ತಿದೆ.
ಹಬ್ಬದ ಮರುದಿನ ಅಂದರೆ ಅಕ್ಟೋಬರ್ 25 ರಂದು ಶಾಲೆ ಆರಂಭಿಸಲು ಶಿಕ್ಷಣ ಇಲಾಖೆ ಆದೇಶಿಸಿದೆ. ಹಬ್ಬದ ಮರುದಿನವೇ ಶಾಲೆ ಆರಂಭಿಸುವುದರಿಂದ ಮಕ್ಕಳ ಮೇಲೆ ಒತ್ತಡ ಹೆಚ್ಚಾಗುವ ಆತಂಕ ಎದುರಾಗಿದೆ. ಪ್ರಸ್ತುತ ಮಕ್ಕಳು ಶಾಲಾ ರಜೆಯನ್ನು ಆನಂದಿಸುತ್ತಿದ್ದಾರೆ. ದಸರಾ ಆಚರಣೆಯಲ್ಲಿಯೂ ಭಾಗವಹಿಸಿದ್ದರು.
ಇದನ್ನೂ ಸಹ ಓದಿ: ನಾದಬ್ರಹ್ಮ ಹಂಸಲೇಖ ಅವರಿಗೆ ಸಂಗೀತ ವಿಶ್ವವಿದ್ಯಾಲಯದಿಂದ ಡಿಲಿಟ್ ಪದವಿ ಪ್ರಧಾನ
ಮೊದಲು ಒಂದು ತಿಂಗಳು ದಸರಾ ರಜೆ ಇದ್ದು, ಈಗ ಅದನ್ನು 15 ದಿನಗಳಿಗೆ ಇಳಿಸಲಾಗಿದೆ. ಶಾಲೆಗಳಿಗೆ ದಸರಾ ರಜೆ ಕಡಿತಗೊಳಿಸಿರುವುದು ಸರಿಯಲ್ಲ ಎಂಬುದು ಶಿಕ್ಷಕರ ವಾದ. ಈಗ ದಸರಾ ಹಬ್ಬದ ಮರುದಿನವೇ ಶಾಲೆ ಆರಂಭವಾಗುತ್ತಿದ್ದು, ಮಕ್ಕಳು ಒತ್ತಡದಲ್ಲಿದ್ದಾರೆ. ಹೀಗಾಗಿ ದಸರಾ ರಜೆಯನ್ನು ಅಕ್ಟೋಬರ್ 30ರವರೆಗೆ ವಿಸ್ತರಿಸುವಂತೆ ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರಿಗೆ ಪತ್ರ ಬರೆದಿದೆ.
ಕಳೆದ ವರ್ಷ ರಜೆ ವಿಸ್ತರಣೆ ಕುರಿತು ಶಿಕ್ಷಣ ಇಲಾಖೆ ಶಿಕ್ಷಕರ ಸಂಘಕ್ಕೆ ಮೌಖಿಕವಾಗಿ ತಿಳಿಸಿದ್ದರೂ ಈ ವರ್ಷ ರಜೆ ಅವಧಿ ವಿಸ್ತರಣೆ ಮಾಡಿಲ್ಲ. ಶಿಕ್ಷಕರ ರಜೆ ಮೊಟಕುಗೊಳಿಸಲಾಗಿದೆ ಎಂಬ ಆರೋಪವೂ ಇದೆ. ಇದೇ ಕಾರಣಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ರಜೆ ವಿಸ್ತರಣೆ ಕುರಿತು ಶಿಕ್ಷಕರ ಸಂಘ ಈಗಾಗಲೇ ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದೆ. 25ರಂದು ಶಾಲೆ ಆರಂಭವಾಗಲಿದ್ದು, ಮಕ್ಕಳಿಗೆ ಹಬ್ಬ ಆಚರಿಸಲು ಸಾಧ್ಯವಾಗುತ್ತಿಲ್ಲ ಎಂದು ಶಿಕ್ಷಕರ ಸಂಘದವರು ತಿಳಿಸಿದ್ದಾರೆ. ಶಾಲಾ ರಜೆಯನ್ನು ಅಕ್ಟೋಬರ್ 31 ರವರೆಗೆ ವಿಸ್ತರಿಸಬೇಕೆಂದು ಶಿಕ್ಷಕರ ಸಂಘ ಒತ್ತಾಯಿಸಿದೆ ಆದರೆ ದಸರಾ ರಜೆಯನ್ನು ವಿಸ್ತರಿಸುವ ಬಗ್ಗೆ ಅಧಿಕೃತ ಮಾಹಿತಿ ಇಲ್ಲ.