ಶಿವಮೊಗ್ಗ ನಗರದಾದ್ಯಂತ 144 ಸೆಕ್ಷನ್ ಜಾರಿ: ಈದ್ ಮಿಲಾದ್ ಮೆರವಣಿಗೆಯಲ್ಲಿ ಹಿಂಸಾಚಾರ

0

ಭಾನುವಾರ ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಟೌಟ್ ವಿಚಾರವಾಗಿ ನಡೆದ ಮಾತಿನ ಚಕಮಕಿ ಹಿಂಸಾಚಾರದ ಪರಿಣಾಮವಾಗಿ ಆರಕ್ಕೂ ಹೆಚ್ಚು ಮನೆಗಳ ಮೇಲೆ ಕಲ್ಲು ತೂರಾಟ ನಡೆದಿದೆ.

shivamogga 144 section today

ರಾಗಿಗುಡ್ಡದ ಈದ್ ಮಿಲಾದ್ ಕಟೌಟ್‌ಗೆ ಯಾರೋ ಬಣ್ಣ ಬಳಿದಿದ್ದಾರೆ ಎಂದು ಆರೋಪಿಸಿ ಜನರ ಗುಂಪೊಂದು ಬೆಳಗ್ಗೆ ಪ್ರತಿಭಟನೆ ನಡೆಸಿತ್ತು. ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ ಸಮಾಧಾನಪಡಿಸಿದರು. ಆದರೆ, ಸಂಜೆ ವೇಳೆಗೆ ಗುಂಪೊಂದು ಸಮುದಾಯದ ಆರಕ್ಕೂ ಹೆಚ್ಚು ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿ ವಾಹನಗಳಿಗೆ ಹಾನಿ ಮಾಡಿದೆ.

ಶಾಂತಿನಗರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿರುವ ಬಗ್ಗೆ ವರದಿಯಾಗಿದೆ. ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಎರಡೂ ಸಮುದಾಯಗಳ 25 ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಕ್ಷಿಪ್ರ ಕಾರ್ಯಾಚರಣೆ ಪಡೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಇದನ್ನು ಸಹ ಓದಿ: ದಂಪತಿಗಳ ಮೇಲೆ ಕಾರು ಚಲಾಯಿಸಿದ ಆರೋಪ: ಕನ್ನಡ ನಟ ನಾಗಭೂಷಣ್ ಬಂಧನ

ಶಿವಮೊಗ್ಗ ನಗರದ ಇತರೆ ಪ್ರದೇಶದಲ್ಲಿಯು ಕಿಡಿಗೇಡಿಗಳು ಗಲಭೆ ಉಂಟು ಮಾಡುವ ಸಂಭವ ಇದೆ. ಆದ್ದರಿಂದ ಮುಂಜಾಗ್ರತ ಕ್ರಮವಾಗಿ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಿಷೇಧಾಜ್ಞೆ ಜಾರಿಗೊಳಿಸುವಂತೆ ಪೊಲೀಸ್‌ ಇಲಾಖೆ ಮನವಿ ಮಾಡಿತ್ತು. ಈ ಹಿನ್ನೆಲೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ರಾತ್ರಿ 1 ಗಂಟೆಯಿಂದಲೆ ನಿಷೇಧಾಜ್ಞೆ ಜಾರಿಯಲ್ಲಿದೆ.

ನಿಷೇಧಾಜ್ಞೆ ಸಂದರ್ಭ ಐದು ಜನರಿಗಿಂತಲು ಹೆಚ್ಚು ಜನರು ಗುಂಪುಗೂಡುವುದು ಮತ್ತು ಓಡಾಡುವುದನ್ನು ನಿಷೇಧಿಸಲಾಗಿದೆ. ಈ ಅವಧಿಯಲ್ಲಿ ಯಾವುದೆ ಮೆರವಣಿಗೆ, ಪ್ರತಿಭಟನೆ, ಸಭೆ, ಸಮಾರಂಭಗಳನ್ನು ನಡೆಸುವಂತಿಲ್ಲ ಎಂದು ಅದೇಶದಲ್ಲಿ ತಿಳಿಸಲಾಗಿದೆ.

Leave A Reply

Your email address will not be published.